ರಾಮನಗರ : ಪರೀಕ್ಷೆ ಭಯಕ್ಕೆ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ರಕ್ಷಿಸಿದ್ದಾರೆ.

ಬಿಇಎಂಎಲ್ ಲೇಔಟ್ ನಿವಾಸಿ, ಮನಃಶಾಸ್ತ್ರ ಅಧ್ಯಯನ ಮಾಡುತ್ತಿರುವ ಇಶಾ ಪ್ರಸಾದ್ ಬುಧವಾರ ರಾಮದೇವರ ಬೆಟ್ಟಕ್ಕೆ ಏಕಾಂಗಿಯಾಗಿ ಭೇಟಿ ನೀಡಿದ್ದರು. ಹಾಜರಾತಿ ಕೊರತೆ ಮತ್ತು ಪರೀಕ್ಷೆಯ ಭಯದಿಂದಾಗಿ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಇಶಾ ಬುಧವಾರ ಮಧ್ಯಾಹ್ನ ಬೆಟ್ಟಕ್ಕೆ ಭೇಟಿ ನೀಡಿ ವೀಕ್ಷಣಾ ಸ್ಥಳದಿಂದ ಜಿಗಿದಿದ್ದಾಳೆ. ಆದರೆ ಅವಳು ಮರವೊಂದರಲ್ಲಿ ಸಿಲುಕಿ ಪ್ರಜ್ಞೆ ತಪ್ಪಿದಳು ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳೀಯರ ಸಹಾಯದಿಂದ ಸಂಜೆ ಅವಳನ್ನು ರಕ್ಷಿಸಿದ್ದಾರೆ.ಪ್ರಾಥಮಿಕ ಚಿಕಿತ್ಸೆಗಾಗಿ ಇಶಾಳನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read