HomeIndiaBIG NEWS : 'JEE' ಪರೀಕ್ಷೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

BIG NEWS : ‘JEE’ ಪರೀಕ್ಷೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೋಟಾದಲ್ಲಿ ಖಾಸಗಿ ಕೋಚಿಂಗ್ ಮೂಲಕ ಎಂಜಿನಿಯರಿಂಗ್ ಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಮೊರಾದಾಬಾದ್ನ ಮೊಹಮ್ಮದ್ ಜೈದ್ ಎಂದು ಗುರುತಿಸಲಾಗಿದ್ದು, 17 ಅಥವಾ 18 ವರ್ಷ ವಯಸ್ಸಿನವನು. ಕೋಟಾ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದ ಜೈದ್ ಜೆಇಇ ಮೇನ್ಸ್ ಕೋಚಿಂಗ್ ಪಡೆಯುತ್ತಿದ್ದನು. ಈತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಸದ್ಯ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ..ಜವಾಹರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಕುಟುಂಬಕ್ಕೆ ಮಾಹಿತಿ ನೀಡಿದ ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದಾರೆ. ಕೋಟಾದಲ್ಲಿ 2023 ರಲ್ಲಿ 29 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular