ವಿಚ್ಛೇದನದ ಬೆನ್ನಲ್ಲೇ ಅಚ್ಚರಿ ಘಟನೆ: ಏರ್‌ಪೋರ್ಟ್‌ನಲ್ಲಿ ಧನಶ್ರೀ, ಹಿನ್ನೆಲೆಯಲ್ಲಿ ಮಾಜಿ ಪತಿ ಬೌಲಿಂಗ್ | Watch

ಕ್ರಿಕೆಟಿಗ ಯುಜವೇಂದ್ರ ಚಹಲ್ ಮತ್ತು ಅವರ ಮಾಜಿ ಪತ್ನಿ ಧನಶ್ರೀ ವರ್ಮಾ ಇತ್ತೀಚೆಗೆ ವಿಚ್ಛೇದನ ಪಡೆದದ್ದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಇದೀಗ ಅಚ್ಚರಿಯ ಘಟನೆಯೊಂದು ನಡೆದಿದೆ. ಧನಶ್ರೀ ವರ್ಮಾ, ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಾಗ, ಹಿನ್ನೆಲೆಯಲ್ಲಿ ಇದ್ದ ದೊಡ್ಡ ಪರದೆಯ ಮೇಲೆ ಯುಜವೇಂದ್ರ ಚಹಲ್, ಬೌಲಿಂಗ್ ಮಾಡುತ್ತಿರುವ ದೃಶ್ಯ ಪ್ರಸಾರವಾಗುತ್ತಿತ್ತು. ಈ ಘಟನೆ ನಡೆದಿದ್ದು, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ನಡೆಯುತ್ತಿದ್ದಾಗ. ಇತ್ತೀಚೆಗಷ್ಟೇ ವಿಚ್ಛೇದನ ಪಡೆದ ಈ ಜೋಡಿಯ ಈ ರೀತಿಯ ಕಾಕತಾಳೀಯ ಭೇಟಿಯನ್ನು ಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ‘ಏನ್ ಟೈಮಿಂಗ್ ಗುರು’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಡಿಸೆಂಬರ್ 2020 ರಲ್ಲಿ ಗುರುಗ್ರಾಮದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುಜವೇಂದ್ರ ಚಹಲ್ ಮತ್ತು ಧನಶ್ರೀ ಮಾರ್ಚ್ 2025 ರಲ್ಲಿ ವಿಚ್ಛೇದನ ಪಡೆದರು. ಮಾರ್ಚ್ 20 ರಂದು ಈ ಜೋಡಿ ವಿಚ್ಛೇದನ ಪ್ರಕರಣದ ವಿಚಾರಣೆಗಾಗಿ ಬಾಂದ್ರಾ ನ್ಯಾಯಾಲಯಕ್ಕೆ ಹಾಜರಾಗಿತ್ತು. ಧನಶ್ರೀ, ಚಹಲ್ ಅವರಿಂದ 60 ಕೋಟಿ ರೂಪಾಯಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ, ಧನಶ್ರೀ ಅವರ ಕುಟುಂಬ ಈ ವದಂತಿಗಳನ್ನು ನಿರಾಕರಿಸಿತ್ತು.

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಚಹಲ್ ಅವರ ಬೌಲಿಂಗ್ ಅದ್ಭುತವಾಗಿತ್ತು. ಪಂಜಾಬ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ಆಗಿದ್ದ ಕೋಲ್ಕತ್ತಾ ತಂಡವನ್ನು 16 ರನ್‌ಗಳಿಂದ ಸೋಲಿಸಿತ್ತು. ಚಹಲ್ ಕೇವಲ 95 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಪಡೆದು ಎದುರಾಳಿ ತಂಡವನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲೂ ಚಹಲ್ ಉತ್ತಮ ಪ್ರದರ್ಶನ ನೀಡಿದ್ದರು. ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಐದು ವಿಕೆಟ್‌ಗಳಿಂದ ಜಯಗಳಿಸಿತ್ತು. ಚಹಲ್ ಮೂರು ಓವರ್‌ಗಳಲ್ಲಿ ಕೇವಲ 11 ರನ್ ನೀಡಿ ಎರಡು ವಿಕೆಟ್‌ಗಳನ್ನು ಪಡೆದಿದ್ದರು.

ಪಂಜಾಬ್ ಕಿಂಗ್ಸ್ ತಂಡವು ಮುಂದಿನ ಪಂದ್ಯವನ್ನು ಏಪ್ರಿಲ್ 20 ರಂದು ಮುಲ್ಲನ್‌ಪುರದಲ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read