HomeLatest NewsBIG NEWS: ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

BIG NEWS: ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

ಬೆಂಗಳೂರು: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ತಾವು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುತ್ತಿರುವುದಾಗಿ ಹಾಗೂ ತಾವು ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಗಿ ಅಸಮಾಧಾನಗೊಂಡು ಬಿಜೆಪಿಯ ಚಟುವಟಿಕೆಗಳಿಂದ ದೂರ ಇದ್ದರು. ಇದೀಗ ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿದ್ದು, ಇನ್ಮುಂದೆ ತಾವು ಪರಿಸರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular