ಅ. 17 ರಂದು ‘ತಲಕಾವೇರಿ ಪವಿತ್ರ ತೀರ್ಥೋದ್ಭವ’ : ಭಕ್ತರಿಗೆ ಇಲ್ಲಿದೆ ಮಾಹಿತಿ

ಮಡಿಕೇರಿ : 2023ರ ಅಕ್ಟೋಬರ್ ತಿಂಗಳಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆಪ್ಟೆಂಬರ್, 27 ರಂದು ಬೆಳಗ್ಗೆ 9.29 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ‘ಪತ್ತಾಯಕ್ಕೆ ಅಕ್ಕಿ ಹಾಕುವುದು’. ಅಕ್ಟೋಬರ್, 05 ರಂದು ಬೆಳಗ್ಗೆ 8.31 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’. ಅಕ್ಟೋಬರ್, 15 ರಂದು ಮಧ್ಯಾಹ್ನ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ‘ಅಕ್ಷಯ ಪಾತ್ರೆ ಇರಿಸುವುದು’ ಮತ್ತು ಸಂಜೆ 4.05 ಗಂಟೆಗೆ ಸಲ್ಲುವ ಕುಂಭ ಲಗ್ನದಲ್ಲಿ ‘ಕಾಣಿಕೆ ಡಬ್ಬಿ’ ಗಳನ್ನು ಇಡುವುದು.
ಅಕ್ಟೋಬರ್, 17 ರಂದು ರಾತ್ರಿ 1.27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜರುಗಲಿದೆ  ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಅ. 17 ರಂದು ಮಧ್ಯರಾತ್ರಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ. ಬ್ರಹ್ಮಕುಂಡಿಕೆಯಲ್ಲಿ ಜೀವ ಜಲ ಉಕ್ಕಿ ಜೀವನದಿ ಕಾವೇರಿ ದರ್ಶನವಾಗಲಿದೆ. ತೀರ್ಥೋದ್ಭವಕ್ಕೆ ಪೂರಕವಾಗಿ ವಾರ ಮೊದಲೇ ವಿವಿಧ ಕಾರ್ಯಗಳು ನೆರವೇರಲಿವೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read