BREAKING : ಹೊಸ ವರ್ಷದ ದಿನವೇ ರಾಜ್ಯದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ.!

ರಾಮನಗರ : ಹೊಸ ವರ್ಷದ ದಿನವೇ ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇನೋವಾ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆಯ ತಾವರೆಕರೆ ಬಳಿ ಘಟನೆ ನಡೆದಿದೆ.  ಇಂದು ಬೆಳಗ್ಗೆ 3 ಗಂಟೆ ವೇಳೆಗೆ ಟೀ ಕುಡಿಯಲು ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಮಂಜು ಹಾಗೂ ಕಿರಣ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ಜಿಲ್ಲೆಯ ತಾವರೆಕರೆ ಬಳಿ ಘಟನೆ ನಡೆದಿದೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಹೊಸ ವರ್ಷದ ದಿನವೇ ಇಬ್ಬರು ಯುವಕರು ಪ್ರಾಣ ತೆತ್ತಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read