HomeKarnatakaBREAKING : ದಾವಣಗೆರೆಯಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

BREAKING : ದಾವಣಗೆರೆಯಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ : ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54 ರಲ್ಲಿ ನಡೆದಿದೆ.

ಮೃತರನ್ನು ಕೇರಳ ಮೂಲದ ಅತುಲ್ (25) ಋಷಿಕೇಶ್ (24) ಎಂದು ಗುರುತಿಸಲಾಗಿದೆ. ಜಾಲಿ ರೈಡ್ ಗೆ ಬಂದವರು ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.

ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ, ರಸ್ತೆ ಮದ್ಯೆ ಬಿದ್ದಿದ್ದ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಚಾಲಕನಿಗೆ ಕೂಡ ಗಾಯಗಳಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular