
ರಾಜಧಾನಿ ಟೆಹ್ರಾನ್ನಿಂದ ವಾಯುವ್ಯಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್ರೌಡ್ ನಗರದಲ್ಲಿ ಈ ಘಟನೆ ಸಂಭವಿಸಿದ್ದು ಹದಿನೇಳು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಮುಂಜಾನೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಹೊತ್ತಿಕೊಂಡಾಗ ಭಾರಿ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ಸೆಪ್ಟೆಂಬರ್ ನಲ್ಲಿ ಇರಾನ್ ನ ರಕ್ಷಣಾ ಸಚಿವಾಲಯದ ಒಡೆತನದ ಕಾರು ಬ್ಯಾಟರಿ ಕಾರ್ಖಾನೆಯಲ್ಲಿ ಒಂದು ವಾರದೊಳಗೆ ಎರಡನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.

