BREAKING : ಬೆಂಗಳೂರಿನ ‘ವಿನಾಯಕ ಥಿಯೇಟರ್’ ಬಳಿ ಭೀಕರ ಅಗ್ನಿ ಅವಘಡ : 8 ಮನೆಗಳು ಸುಟ್ಟು ಭಸ್ಮ, ಓರ್ವನ ಸ್ಥಿತಿ ಗಂಭೀರ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಥಿಯೇಟರ್ ಬಳಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಶೀಟ್ ಮನೆಗಳು ಸುಟ್ಟು ಭಸ್ಮವಾಗಿದೆ.

ಭೀಕರ ಅಗ್ನಿ ಅವಘಡದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಕಿಯ ಕೆನ್ನಾಲಿಗೆಗೆ ಗೋದಾಮು ಕೂಡ ಸುಟ್ಟು ಭಸ್ಮವಾಗಿದ್ದು., ಈ ಗೋದಾಮಿನಲ್ಲಿ ಡೆಕೋರೇಷನ್ ವಸ್ತಗಳನ್ನ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read