BREAKING : ಕಲಬುರಗಿಯಲ್ಲಿ ದಾರುಣ ಘಟನೆ ; ಬಸ್ ಅಡ್ಡಗಟ್ಟಿ ಅಪ್ರಾಪ್ತೆಯ ಕತ್ತು ಕೊಯ್ದ ದುಷ್ಕರ್ಮಿಗಳು..!

ಕಲಬುರಗಿಯಲ್ಲಿ ದಾರುಣ ಘಟನೆ ನಡೆದಿದ್ದು, ಬಸ್  ಅಡ್ಡಗಟ್ಟಿ ದುಷ್ಕರ್ಮಿಗಳು ಅಪ್ರಾಪ್ತೆಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಕಲಬುರಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ಬಸ್ ನಲ್ಲಿ ಬರುತ್ತಿದ್ದಳು. ಈ ವೇಳೆ ಬಸ್ ಅಡ್ಡಗಟ್ಟಿದ ಯುವಕರ ಗುಂಪು ಬಾಲಕಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾರೆ.  ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read