HomeLatest NewsSHOCKING : ಬೆಂಗಳೂರಲ್ಲಿ ಘೋರ ದುರಂತ ; ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದು ಯುವಕ...

SHOCKING : ಬೆಂಗಳೂರಲ್ಲಿ ಘೋರ ದುರಂತ ; ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದು ಯುವಕ ಸಾವು.!

ಬೆಂಗಳೂರಿನ ಜ್ಞಾನಭಾರತಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಬೆಂಗಳೂರಿನ ಜ್ಞಾನಭಾರತಿ ರೈಲು ನಿಲ್ದಾಣದಲ್ಲಿ ನಡೆದ ಈ ದುರಂತವು, ರೈಲು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರೈಲು ನಿಲ್ದಾಣಗಳಲ್ಲಿನ ಭದ್ರತೆ ಮತ್ತು ಪ್ರಯಾಣಿಕರ ನಿರ್ಲಕ್ಷ್ಯ ಎರಡೂ ಈ ಸಾವುಗಳಿಗೆ ಕಾರಣವಾಗುತ್ತಿವೆ.

ಮೆಜೆಸ್ಟಿಕ್‌ನಿಂದ ಮೈಸೂರಿಗೆ ತೆರಳುತ್ತಿದ್ದ ‘ಬೆಂಗಳೂರು – ಮೈಸೂರು ಪ್ಯಾಸೆಂಜರ್’ ರೈಲಿನಲ್ಲಿ ಈ ಘಟನೆ ನಡೆದಿದೆ.ಮೃತ ವ್ಯಕ್ತಿಯನ್ನು  ರಾಮನಗರ ಜಿಲ್ಲೆಯ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಹೇಗೆ ನಡೆಯಿತು: ರೈಲು ನಿಧಾನವಾಗಿ ಚಲಿಸುತ್ತಿದ್ದಾಗ ಹರೀಶ್ ಅವರು ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆ ಸಮಯದಲ್ಲಿ ಕಾಲು ಜಾರಿ ರೈಲಿನ ಚಕ್ರದ ಅಡಿಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಇತರ ಪ್ರಯಾಣಿಕರು ಕೂಡಲೇ ರೈಲಿನ ಚೈನ್ ಎಳೆದು ನಿಲ್ಲಿಸಿದ್ದಾರೆ, ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.ಇಂತಹ ದುರ್ಘಟನೆಗಳನ್ನು ತಪ್ಪಿಸಲು ಚಲಿಸುತ್ತಿರುವ ರೈಲುಗಳನ್ನು ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular