ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು., ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮೃತರನ್ನು ಜೆ ಶಿವಾ, ಮಧು ಸೂಧನ್ ರೆಡ್ಡಿ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಯಲಹಂಕದಲ್ಲಿ ಎಂಬೆಸ್ಸಿ ಸಂಸ್ಥೆಯ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಾರ್ಮಿಕರು ಅಡಿಪಾಯಕ್ಕೆ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಧಾರಾಕಾರ ಮಳೆಯಾಗಿದ್ದರಿಂದ ಗುಂಡಿಯಲ್ಲಿ ನೀರು ತುಂಬಿಕೊಂಡು ಮಣ್ಣು ಸಡಿಲವಾಗಿ ಕುಸಿದು ಬಿದ್ದಿದೆ. ಕೆಲಸ ಮಾಡುತ್ತಿದ್ದ ಕಾರ್ಮಿಕರು ಮೇಲೆ ಬಂದು ಪಾರಾಗಿದ್ದಾರೆ. ಆದರೆ, ಆಂಧ್ರಪ್ರದೇಶದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ.ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದರೆ, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.