ತುಮಕೂರು: ಭಾರಿ ಗಾಳಿ ಮಳೆಯ ರಭಸಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಲಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯೋಗೇಶ್(33) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ. ಕೊರಟಗೆರೆ ತಾಲೂಕಿನ ಚಿಲಗಾನಹಳ್ಳಿ ಗ್ರಾಮದ ಯೋಗೇಶ್ ವಡ್ಡಗೆರೆಯಿಂದ ಚಿಲಗಾನಹಳ್ಳಿಗೆ ಹೋಗುವಾಗ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಮಳೆಯಾಗಿದೆ. ಬಿರುಗಾಳಿಯಿಂದಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಯೋಗೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.