HomeLatest Newsರಾಜ್ಯದಲ್ಲಿ ಘೋರ ದುರಂತ: ಸಿಡಿಲು ಬಡಿದು ನಾಲ್ವರು ಸಾವು

ರಾಜ್ಯದಲ್ಲಿ ಘೋರ ದುರಂತ: ಸಿಡಿಲು ಬಡಿದು ನಾಲ್ವರು ಸಾವು

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ವಿವಿಧ ಕಡೆ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಇದೇ ವೇಳೆ 21 ಕುರಿಗಳು ಸಿಡಿಲಿನ ಆಘಾತಕ್ಕೆ ಮೃತಪಟ್ಟಿವೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ. ಚಂದರಗಿ ಗ್ರಾಮದ ಹೊಲದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಕುರಿಗಾಹಿ ನಿಂಗನಗೌಡ ಪಾಟೀಲ(35)  ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದ ಸಮೀಪ ಕುರಿ ಮೇಯಿಸುತ್ತಿದ್ದ ವೇಳೆ ಹುಲಿಕಟ್ಟಿ ಗ್ರಾಮದ ಮಾಳಪ್ಪ ಸೋಮಪ್ಪ ಗಡ್ಡೆ(40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಈ ವೇಳೆ ಅವರೊಂದಿಗೆ ಇದ್ದ ಪುತ್ರ ಆಕಾಶ್(19) ಸಿಡಿಲಾಘಾತಕ್ಕೊಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಅಲಗೂರಿನಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಆಕಾಶ ಹಯ್ಯಾಳಪ್ಪ ಯಂಕಂಚಿ(17) ಮೃತಪಟ್ಟಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಸಿಡಿಲು ಬಡಿದು ಕೋಟೇಶ ಭೀಮಪ್ಪ ನರೇಗಲ್(24)  ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular