ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿರುವ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.
ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರ್ನೆ ಎಂಬ ವರ ವಧುವಿಗೆ ತಾಳಿ ಕಟ್ಟಿದ್ದರು. ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಪ್ರವೀಣ್ ಕುರ್ನೆಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
ಇಂದು ಪೂಜಾ ಎಂಬ ವಧುವಿನ ಜೊತೆ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ನಿವಾಸಿ ಪ್ರವೀಣ್ ಕುರ್ನೆ ವಿವಾಹ ನಿಗದಿಯಾಗಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಗಂಡನ ಜೊತೆ ಹಾಗೆ ಇರಬೇಕು, ಹೀಗೆ ಸಂಸಾರ ಮಾಡಬೇಕು ಎಂದು ನೂರಾರು ಕನಸುಗಳನ್ನು ಕಟ್ಟಿಕೊಂಡು ಬಂದ ವಧುವಿಗೆ ಬರ ಸಿಡಿಲು ಬಡಿದಂತಾಗಿದೆ. ಮದುವೆಗೆ ಬಂದ ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.
ಸುದ್ದಿ ಈಗಷ್ಟೇ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.