ಬೆಂಗಳೂರು: ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ರೈತ ನಾಗಪ್ಪ ಕಣಸೋಗಿ(67) ಎತ್ತುಗಳನ್ನು ಮೇಯಿಸಲು ಹೋಗಿದ್ದಾಗ ಸಿಡಿಲು ಪಡೆದು ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಸವದತ್ತಿ ತಾಲೂಕಿನ ಹಲಕಿ ಗ್ರಾಮದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲಕಿ ಗ್ರಾಮದ ಬಾಲನಾಯ್ಕ(65) ಮೃತಪಟ್ಟವರು. ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿ ಮನೆಗೆ ಮರಳುವಾಗ ಗ್ರಾಮದ ಬಸ್ ನಿಲ್ದಾಣದ ಸಮೀಪವಿದ್ದ ಹುಣಸೆ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮಳೆ ಬಂದ ಕಾರಣ ಅದೇ ಮರದ ಕೆಳಗೆ ನಿಂತಿದ್ದ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಗ್ರಾಮದ ಶಾನೂರ್ ಹುಸೇನ್ ಸಾಬ್(28) ಕೂಡ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.