BREAKING : ವಿಜಯಪುರದಲ್ಲಿ ಘೋರ ದುರಂತ : ಆಟವಾಡುತ್ತಾ ಬಾವಿಗೆ ಬಿದ್ದು 8 ವರ್ಷದ ಬಾಲಕಿ ಸಾವು.!

ವಿಜಯಪುರ : ವಿಜಯಪುರದಲ್ಲಿ ಘೋರ ದುರಂತ ಸಂಭವಿಸಿದ್ದು, ಆಟವಾಡುತ್ತಾ ಬಾವಿಗೆ ಬಿದ್ದು 8 ವರ್ಷದ ಬಾಲಕಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧನಸಿಂಗ್ ತಾಂಡಾದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಅರ್ಚನಾ ದೀಪಕ್ ರಾಠೋಡ ( 8) ಎಂದು ಗುರುತಿಸಲಾಗಿದೆ. ಬಾಲಕಿ ತನ್ನ ತಾಯಿ ಜೊತೆ ಕುರಿ ಮೇಯಿಸಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಬಾಲಕಿ ಬಾವಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕಿಯ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಈ ಸಂಬಂಧ ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read