ಬೆಂಗಳೂರು : ಹಬ್ಬದ ದಿನವೇ ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಸಾವನ್ನಪ್ಪಿದ್ದಾರೆ.
ಮನೆ ಮೇಲೆ ಒಣಗಿದ್ದ ಬಟ್ಟೆ ತೆಗೆಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಲಲಿತಮ್ಮ (55) ಹಾಗೂ ಅವರ ಮಗ ಸಂಜಯ್ (35) ಎಂದು ಗುರುತಿಸಲಾಗಿದೆ.ಮಗಳು ಲಕ್ಷಮ್ಮ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಲಿತಮ್ಮ ಮನೆ ಮೇಲೆ ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋಗಿದ್ದಾರೆ. ಈ ವೇಳೆ ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಅವರಿಗೆ ತಗುಲಿದೆ. ತಾಯಿಯ ಚೀರಾಟ ಕೇಳಿ ಮಗ ಕೂಡ ರಕ್ಷಣೆ ಧಾವಿಸಿದ್ದು, ವಿದ್ಯುತ್ ಶಾಕ್ ನಿಂದ ಇಬ್ಬರು ಕೂಡ ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ಸಮೀಪವೇ ಲಲಿತಮ್ಮ ಬಟ್ಟೆ ಒಣ ಹಾಕಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.