ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನವೇ ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಧನುಷ್ (18) ಸಂತೋಷ್ (18) ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳು ಬೆಂಗಳೂರಿನ ಕೋಣನಕುಂಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.
ಬನಶಂಕರಿ ಬಳಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ನಿನ್ನೆ ಸ್ನೇಹಿತರ ಜೊತೆ ಕಬ್ಬಾಳು ದೇವಸ್ಥಾನಕ್ಕೆ ಬಂದಿದ್ದರು. ನಂತರ ಕೆರೆಯಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

