ಮಹಿಳೆಯರ ಪಿಜಿಯೂ ಸುರಕ್ಷಿತವಲ್ಲವೇ ಎಂಬ ಆತಂಕ ಹುಟ್ಟಿಸುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯರ ಪಿಜಿಗೆ ನುಗ್ಗಿದ ಕಳ್ಳ, ಯಾರಿಗೂ ಸುಳಿವು ಸಿಗದಂತೆ ಲ್ಯಾಪ್‌ಟಾಪ್, ಸ್ಮಾರ್ಟ್‌ವಾಚ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಎಸ್.ಜಿ. ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಗರದ ಕೋರಮಂಗಲದಲ್ಲಿರುವ ಮಹಿಳೆಯರ ಪಿಜಿಯೊಂದಕ್ಕೆ ರಾತ್ರಿ ವೇಳೆ ಅಪರಿಚಿತ ಕಳ್ಳ ನುಗ್ಗಿ, ಯಾರಿಗೂ ಅನುಮಾನ ಬಾರದಂತೆ ಲ್ಯಾಪ್‌ಟಾಪ್, ಸ್ಮಾರ್ಟ್‌ವಾಚ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾದ ಘಟನೆ ನಡೆದಿದೆ.
ಜುಲೈ 30ರಂದು ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದ ಮಹಿಳೆಯರ ಪಿಜಿಯಲ್ಲಿ ಈ ಕಳ್ಳತನ ನಡೆದಿದ್ದು, ಮುಖ್ಯ ದ್ವಾರದ ಮೂಲಕ ಒಳನುಗ್ಗಿದ ಕಳ್ಳ, ಕೊಠಡಿಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಕಳ್ಳತನ ನಡೆಸಿದ್ದಾನೆ. ಕಳ್ಳತನದ ವಿಷಯ ತಿಳಿಯುತ್ತಿದ್ದಂತೆ ಪಿಜಿ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣವು ಎಸ್.ಜಿ. ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

