ಬೆಂಗಳೂರು : ಮಧ್ಯರಾತ್ರಿಯ ಬಿರಿಯಾನಿ ಸವಿಯುವ ಆಸೆ ಮೂವರು ಗೆಳೆಯರ ಪಾಲಿಗೆ ದುರಂತವಾಗಿದೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ದಾಬಸ್ಪೇಟೆ ಬಳಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಹೊರವಲಯದ ನೆಲಮಂಗಲದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿರಿಯಾನಿ ತಿನ್ನಲು ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೆಲಮಂಗಲ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4ರ (ಬೆಂಗಳೂರು-ಪುಣೆ ಹೆದ್ದಾರಿ) ದಾಬಸ್ಪೇಟೆ ಬಳಿ ಈ ಅಪಘಾತ ಸಂಭವಿಸಿದೆ.ಮಧ್ಯರಾತ್ರಿ ಬಿರಿಯಾನಿ ತಿನ್ನಲೆಂದು ಗೆಳೆಯರೆಲ್ಲರೂ ಸೇರಿ ಬೈಕ್ ನಲ್ಲಿ ಹೊರಟಿದ್ದರು. ವೇಗವಾಗಿ ಹೋಗುತ್ತಿದ್ದ ಬೈಕ್ ಗೆ ಲಾರಿಯೊಂದು ನಿಯಂತ್ರಣ ತಪ್ಪಿ ಜೋರಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

