ಬೆಂಗಳೂರು: ನಿಜವಾದ ಪ್ರೇಮಿ ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯ ಸೆರೆ ಹಿಡಿಯುವುದಿಲ್ಲ, ಆ ಫೋಟೋ, ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರೀತಿಯ ನೆಪದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ್ದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದಿಂದ ಈ ಆದೇಶ ನೀಡಲಾಗಿದೆ.
ಅರ್ಜಿದಾರ ಮತ್ತು ಸಂತ್ರಸ್ತೆ ನಡುವೆ ಪ್ರೇಮ ಸಂಬಂಧವಿತ್ತು. ಇಬ್ಬರ ನಡುವೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆದಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಆರೋಪಿ ವಾದ ಮಂಡಿಸಿದ್ದ. ಈ ವಾದವನ್ನು ತಿರಸ್ಕರಿಸಿದ ನ್ಯಾಯಪೀಠ, ಪ್ರೇಮ ಸಂಬಂಧದ ಕಾರಣದಿಂದ ಈ ಘಟನೆ ನಡೆದಿದೆ. ಯಾವುದೇ ನಿಜವಾದ ಪ್ರೇಮಿಯೂ ಖಾಸಗಿ ಕ್ಷಣಗಳ ದೃಶ್ಯಗಳ ಫೋಟೋ ತೆಗೆಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

