HomeAgriculture'ಸೊಪ್ಪು' ತರಲು ಕಾಡಿಗೆ ಹೋಗಿದ್ದ ರೈತನ ಮೇಲೆ ಕಾಡು ಹಂದಿ ದಾಳಿ

‘ಸೊಪ್ಪು’ ತರಲು ಕಾಡಿಗೆ ಹೋಗಿದ್ದ ರೈತನ ಮೇಲೆ ಕಾಡು ಹಂದಿ ದಾಳಿ

ಸೊಪ್ಪು ತರಲು ಕಾಡಿಗೆ ಹೋಗಿದ್ದ ರೈತರೊಬ್ಬರ ಮೇಲೆ ಕಾಡು ಹಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತುಮರಿ ಸಮೀಪದ ಕಟ್ಟಿನಕಾರು ಗ್ರಾಮದ ಕೂಡೂರಿನ ಬಳಿ ನಡೆದಿದೆ.

52 ವರ್ಷದ ಚೌಡನಾಯ್ಕ ಸೊಪ್ಪು ತರುವ ಸಲುವಾಗಿ ಮಂಗಳವಾರ ಮುಂಜಾನೆ ಬೆಟ್ಟಕ್ಕೆ ತೆರಳಿದ್ದು, ಈ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡು ಹಂದಿ ಅವರ ತೊಡೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ.

ಇದರ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ನಿತ್ರಾಣಗೊಂಡಿದ್ದ ಅವರಿಗೆ ನಿಟ್ಟೂರಿನ ಖಾಸಗಿ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಕಾಡು ಹಂದಿ ಹಾವಳಿ ಜಾಸ್ತಿಯಾಗಿದ್ದು, ಇದನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಕೂಡಲೇ ಈ ನಿಟ್ಟಿನಲ್ಲಿ ಕ್ರಮವಹಿಸಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular