ಮೈಸೂರು : ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ಆರೋಪಿ ತೌಸೀಫ್ ಅಲಿಯಾಸ್ ದಾದು ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ತೌಸೀಫ್ ಸಾರ್ವಜನಿಕವಾಗಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದನು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡುವುದು ಅಪರಾಧ ಎಂದು ಗೊತ್ತಿದ್ದರೂ ಯುವಕರು ಮತ್ತೆ ಅದೇ ತಪ್ಪು ಮಾಡುತ್ತಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಹಾಗೂ ವಿನಯ್ ಅರೆಸ್ಟ್ ಆಗಿ ರಿಲೀಸ್ ಆದ ಬೆನ್ನಲ್ಲೇ ಈ ಘಟನೆ ನಡೆದಿದೆ.

