ಬೆಂಗಳೂರು : ಬಿಎಂಟಿಸಿ IBMTC) ಬಸ್ ನಿಲ್ದಾಣದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದು ಆತ್ಮಹತ್ಯೆಯೋ ಅಥವಾ ಆಕಸ್ಮಾತ್ ಆದ ಘಟನೆಯೋ ಗೊತ್ತಿಲ್ಲ. ಪೊಲೀಸರು ಮೃತ ಯುವತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.