HomeKarnatakaBREAKING : ತುಮಕೂರಿನಲ್ಲಿ ಘೋರ ಘಟನೆ : ಪ್ರೇಯಸಿ ಮನೆ ಮುಂದೆಯೇ ನೇಣು ಬಿಗಿದುಕೊಂಡು ಪ್ರಿಯಕರ...

BREAKING : ತುಮಕೂರಿನಲ್ಲಿ ಘೋರ ಘಟನೆ : ಪ್ರೇಯಸಿ ಮನೆ ಮುಂದೆಯೇ ನೇಣು ಬಿಗಿದುಕೊಂಡು ಪ್ರಿಯಕರ ಆತ್ಮಹತ್ಯೆ.!

ತುಮಕೂರು :  ಹುಡುಗಿ  ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಹುಡುಗಿ ಮನೆ ಮುಂದೆ ಯುವಕ ನೇಣಿಗೆ ಶರಣಾದ ಘಟನೆ ಜಯನಗರದಲ್ಲಿ ನಡೆದಿದೆ.

ಮಂಜುನಾಥ್ ಎಂಬ ಯುವಕ ನಿನ್ನೆ ತಡರಾತ್ರಿ ಯುವತಿ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಜುನಾಥ್ ಹಾಗೂ ಹುಡುಗಿ ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಯನ್ನು ಮದುವೆ ಮಾಡಿಕೊಡಿ ಎಂದು ಮಂಜುನಾಥ್ ಹುಡುಗಿ ಮನೆಯವರ ಬಳಿ ಹೇಳಿದ್ದಾನೆ.ಹುಡುಗಿ ಅಪ್ರಾಪ್ತೆಯಾಗಿದ್ದರಿಂದ ಪೋಷಕರು ಮದುವೆಗೆ ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಮಂಜುನಾಥ್ ಹುಡುಗಿ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular