ಬಾಗಲಕೋಟೆ: ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯ ಸೆಕ್ಟರ್ ನಂಬರ್ 48ರ ಮನೆಯಲ್ಲಿ ನಡೆದಿದೆ.
ಭೂಮಿಕಾ ತಿಪ್ಪಣ್ಣವರ(19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯಲ್ಲೇ ನೇಣು ಹಾಕಿಕೊಂಡು ಭೂಮಿಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಟೈಯರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ಹಾಗೂ ಟಾಂಟಾಂ ಚಾಲಕ ಡೊಂಗ್ರಿ ಸಾಬ್ ನದಾಫ್ ಮಧ್ಯ ಪ್ರೀತಿ ಬೆಳೆದಿದ್ದು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಭೂಮಿಕಾ ಹಿಜಾಬ್ ನಲ್ಲಿ ಕಾಣಿಸಿಕೊಂಡಿದ್ದರು. ಆಕೆಯ ಪೋಷಕರು ನದಾಫ್ ಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರು.
ಏಕೈಕ ಪುತ್ರಿಯಾಗಿದ್ದ ಭೂಮಿಕಾಗೆ ನದಾಫ್ ಸ್ನೇಹ ಬಿಡುವಂತೆ ಪೋಷಕರು ಬುದ್ಧಿವಾದ ಹೇಳಿದ್ದರು. ಇದರಿಂದ ಬೇಸರಗೊಂಡು ಮನೆಯ ಮೇಲ್ಚಾವಣಿಗೆ ನೇಣು ಹಾಕಿಕೊಂಡು ಭೂಮಿಕಾ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ನದಾಫ್ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಬಾಗಲಕೋಟೆ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

