HomeKarnataka5 ರಿಂದ 7, 15 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ:...

5 ರಿಂದ 7, 15 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ: ಉಚಿತ ಅವಕಾಶ ಲಭ್ಯ

ದಾವಣಗೆರೆ: ಜಿಲ್ಲೆಯ 5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್  ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ನಾತಕೋತ್ತರ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್‌ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular