HomeBusinessಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಸಣ್ಣ ಹೂಡಿಕೆ ಉತ್ತೇಜಿಸಲು ಕೆವೈಸಿ ನಿಯಮ ಸರಳೀಕರಣ

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಸಣ್ಣ ಹೂಡಿಕೆ ಉತ್ತೇಜಿಸಲು ಕೆವೈಸಿ ನಿಯಮ ಸರಳೀಕರಣ

ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಹೂಡಿಕೆ ಉತ್ತೇಜಿಸುವ ಉದ್ದೇಶದಿಂದ ಕೆವೈಸಿ ನಿಯಮಗಳನ್ನು ಸರಳೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಗ್ರಾಮಾಂತರ ಪ್ರದೇಶದ ಜನರಲ್ಲಿ ಹೆಚ್ಚಿನ ಮಟ್ಟದ ಹೂಡಿಕೆ ಆಕರ್ಷಿಸುವ ಉದ್ದೇಶದಿಂದ ಪಾನ್ ಕಾರ್ಡ್ ಬದಲಿಗೆ ಆಧಾರ್ ಕಾರ್ಡ್ ಬಳಸಲು ಚಿಂತನೆ ನಡೆದಿದೆ. ಸಣ್ಣ ಉಳಿತಾಯ ಯೋಜನೆಗಳಾದ ಸುಕನ್ಯಾ ಸಮೃದ್ಧಿ, ಎನ್.ಎಸ್.ಸಿ., ಪಿಎಫ್, ಎಸ್,ಸಿ.ಎಸ್.ಎಸ್. ಗಳಲ್ಲಿ ಆಧಾರ್ ಕಾರ್ಡ್ ಬಳಸಿಕೊಂಡು ಹೂಡಿಕೆ ಮಾಡಲು ಹೊಸ ವ್ಯವಸ್ಥೆ ರೂಪಿಸಲು ಹಣಕಾಸು ಸಚಿವಾಲಯ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಕಾನೂನು ತೊಡಕು ಇಲ್ಲದೆ ಮೃತಪಟ್ಟ ಠೇವಣಿದಾರರ ಹಣವನ್ನು ಅವರ ಉತ್ತರಾಧಿಕಾರಿಗಳಿಗೆ ಸುಲಭವಾಗಿ ಹಸ್ತಾಂತರ ಮಾಡುವ ನಿಟ್ಟಿನಲ್ಲಿ ನಿಯಮಗಳನ್ನು ಸರಳೀಕರಣ ಮಾಡಲು ತೀರ್ಮಾನಿಸಲಾಗಿದೆ. ಇದರೊಂದಿಗೆ ನಾಮಿನೇಷನ್ ಪ್ರಕ್ರಿಯೆಯನ್ನು ಸುಲಭಗೊಳಿಸಲು ಕೂಡ ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular