HomeKarnatakaಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದ ಬಡವರಿಗೆ ಬಿಗ್ ಶಾಕ್: ಈ ಕಾರಣಕ್ಕೆ ಬಿಪಿಎಲ್ ಕಾರ್ಡ್...

ಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದ ಬಡವರಿಗೆ ಬಿಗ್ ಶಾಕ್: ಈ ಕಾರಣಕ್ಕೆ ಬಿಪಿಎಲ್ ಕಾರ್ಡ್ ರದ್ದು: ಗ್ಯಾರಂಟಿ ಸೌಲಭ್ಯವೂ ಕಡಿತ

ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ -ಪಾನ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ.

ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.

ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಪಡಿಸಲು ಮುಂದಾಗಿದೆ. ಆದರೆ, ಇದರಲ್ಲಿ ಅರ್ಧಕ್ಕೂ ಅಧಿಕ ಮಂದಿ ಬಡವರು ಇದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಪಿಎಲ್ ಕಾರ್ಡ್ ನಿಂದ ವಂಚಿತರಾದ ಬಡವರಿಗೆ ಆದಾಯ ತೆರಿಗೆ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ(NOC) ತರುವಂತೆ ಆಹಾರ ಇಲಾಖೆ ಅಧಿಕಾರಿಗಳು ಸೂಚಿಸುತ್ತಿದ್ದು, ಹೀಗಾಗಿ ಬಡವರು ಐಟಿ ಕಚೇರಿಗೆ ಅರ್ಜಿ ಸಲ್ಲಿಸಿ ಎನ್ಒಸಿ  ಕೊಡುವಂತೆ ಮನವಿ ಮಾಡುತ್ತಿದ್ದಾರೆ. ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪಡಿತರ ಕೂಡ ಸಿಗುತ್ತಿಲ್ಲ. ಗೃಹಲಕ್ಷ್ಮಿ ಹಣ ನಿಂತುಹೋಗಿದೆ. ಅನ್ನಭಾಗ್ಯದ ಅಕ್ಕಿ, ಹೆಚ್ಚುವರಿ ಅಕ್ಕಿ ಹಣ ಕೂಡ ಸಿಗುತ್ತಿಲ್ಲ. ಮನೆ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ.

ಹೀಗೆ 1 ಸಾವಿರ ರೂ. ದಂಡ ಪಾವತಿಸಿ ಆಧಾರ್ –ಪಾನ್ ಕಾರ್ಡ್ ಜೋಡಣೆ ಮಾಡಿದ ಬಡವರು ಗ್ಯಾರಂಟಿ ಸೇರಿ ಹಲವು ಸೌಲಭ್ಯಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular