HomeKarnatakaಆಧಾರ್ ಲಿಂಕ್ ಆಗದ ಬ್ಯಾಂಕ್ ಖಾತೆಗೂ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ ಹಣ ಪಾವತಿ

ಆಧಾರ್ ಲಿಂಕ್ ಆಗದ ಬ್ಯಾಂಕ್ ಖಾತೆಗೂ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ ಹಣ ಪಾವತಿ

ಬೆಂಗಳೂರು: ಆಧಾರ್ ಜೋಡಣೆ ಆಗದ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಹೊರತುಪಡಿಸಿ ಬೇರೆ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಮಹಿಳೆಯರು ಆಧಾರ್ ಲಿಂಕ್ ಆಗದ ಬ್ಯಾಂಕ್ ಖಾತೆಯ ಪಾಸ್ ಬುಕ್ ಜೆರಾಕ್ಸ್ ಪ್ರತಿ ನೀಡಬೇಕು. ಅದರ ಜೊತೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ತೆಗೆದುಕೊಂಡು ಬರಬೇಕು. ನೋಂದಣಿ ಮಾಡಿದ ಸ್ಥಳದಲ್ಲಿ ಮಂಜೂರಾತಿ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular