ಪಹಣಿಗೆ ಆಧಾರ್ ಲಿಂಕ್, ಎಲ್ಲವು ದಾಖಲೀಕರಣ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಕಲಬುರಗಿ : ಪಹಣಿಗೆ ಆಧಾರ್‌ ಲಿಂಕ್‌ ಸೇರಿದಂತೆ ಎಲ್ಲ ದಾಖಲೆಗಳನ್ನು ದಾಖಲೀಕರಣ  ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬರಗಾಲ ಘೋಷಣೆ ಮಾಡಿ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾತ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದೂವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಸಂಕಷ್ದದಲ್ಲಿದ ರೈತರಿಗೆ ನೆರವಿಗೆ ಧಾವಿಸಲು ಎನ್.ಡಿ.ಅರ್.ಆಫ್ ಅನುದಾನ ನಿರೀಕ್ಷಿಸಿ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಕೇಂದ್ರ ಸರ್ಕಾರವು ಆರ್.ಟಿ.ಸಿ.ಗೆ ಆಧಾರ್ ಲಿಂಕ್ ಮಾಡಲು ನಿರ್ದೇಶನ ನೀಡಿದ್ದು, ಮುಂದಿನ‌ ದಿನದಲ್ಲಿ ಇದರ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಜೊತೆಗೆ ಕಂದಾಯ, ಸರ್ವೆ, ಸಬ್ ರಿಜಿಸ್ಟಾರ್ ಕಚೇರಿಯ ಎಲ್ಲಾ ದಾಖಲೆಗಳು ಫೆಬ್ರವರಿ‌ 1 ರಿಂದ ಮುಂದಿನ‌ ಒಂದೂವರೆ ವರ್ಷದಲ್ಲಿ ದಾಖಲೀಕರಣ ಮಾಡಲಾಗುತ್ತಿದೆ. ಇದರಿಂದ ವಂಚನೆ ತಡೆಯುವುದಲ್ಲದೆ ದಾಖಲೆ ಹುಡುಕುವ ತಾಪತ್ರಯ ತಪ್ಪಲಿದೆ. ಇದಕ್ಕೆಲ್ಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದ ಅವರು, ಸರ್ವೇಯರ್ ನೇಮಕಾತಿಗೂ ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದರು.

ರಾಜ್ಯದಾದ್ಯಂತ ಒಟ್ಟಾರೆ 35 ಲಕ್ಷ ರೈತರಿಗೆ 650 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಇದೂವರೆಗೆ 24 ಲಕ್ಷ ಜನರಿಗೆ 519 ಕೋಟಿ ರೂ. ಪಾವತಿಯಾಗಿದೆ. 2-3 ದಿನದಲ್ಲಿ ರಾಜ್ಯದ ಉಳಿದ 11-12 ಲಕ್ಷ ಜನರಿಗೆ ಹಣ ಜಮೆ ಮಾಡಲಾಗುತ್ತದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read