HomeAgricultureರೈತರಿಗೆ ಮುಖ್ಯ ಮಾಹಿತಿ: ವಾರದೊಳಗೆ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡಲು ಸರ್ಕಾರದ ನಿರ್ದೇಶನ

ರೈತರಿಗೆ ಮುಖ್ಯ ಮಾಹಿತಿ: ವಾರದೊಳಗೆ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡಲು ಸರ್ಕಾರದ ನಿರ್ದೇಶನ

ಉಡುಪಿ: ವಾರದೊಳಗೆ ತಮ್ಮ ಜಮೀನಿನ ಪಹಣಿಯನ್ನು ರೈತರು ಆಧಾರ್ ಗೆ ಜೋಡಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಪಹಣಿ- ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಉಡುಪಿ ಜಿಲ್ಲೆಯ ಅನೇಕ ರೈತರು ಆಧಾರ್ ಜೋಡಣೆ ಮಾಡಲು ಹಿಂಜರಿಯುತ್ತಿರುವುದರಿಂದ ಇದುವರೆಗೆ ಶೇಕಡ 65 ರಷ್ಟು ಮಾತ್ರ ಪ್ರಗತಿಯಾಗಿದೆ. ಹಾಗಾಗಿ ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಜಮೀನಿನ ಮಾಲೀಕರು ಪಹಣಿಯನ್ನು ಆಧಾರ್ ಗೆ ಜೋಡಣೆ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದೆ ಎಂದು ತಿಳಿಸಿದ್ದಾರೆ.

ನಿಗದಿತ ಸಮಯದಲ್ಲಿ ರೈತರು ಸಾಲದ ಸೌಲಭ್ಯ ಪಡೆದುಕೊಳ್ಳಲು ಅಕ್ರಮ ಖಾತಾ ಬದಲಾವಣೆ ತಡೆಯುವ ನಿಟ್ಟಿನಲ್ಲಿ ಆಧಾರ್ ಜೋಡಣೆ ಅವಶ್ಯಕವಾಗಿದೆ. ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್ ದಾಖಲಾತಿಗಳೊಂದಿಗೆ ಆಧಾರ್ ಜೋಡಣೆಯಾದ ಮೊಬೈಲ್ ನೊಂದಿಗೆ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿ ಸಂಪರ್ಕಿಸಿ ಜೋಡಣೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಈ ಕಾರ್ಯವು ಸೈಬರ್ ಸೆಂಟರ್, ಗ್ರಾಮ ಒನ್ ಸೆಂಟರ್ ಮೊದಲಾದ ಕಡೆ ಮಾಡಲು ಅವಕಾಶ ಇರುವುದಿಲ್ಲ. ಗ್ರಾಮ ಆಡಳಿತ ಅಧಿಕಾರಿಗಳ ಮೂಲಕವೇ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular