HomeLatest Newsವಿದ್ಯುತ್ ಚಾಲಿತ ವಾಹನಗಳಿಗೆ ಆಧಾರ್ ಮಾದರಿಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆ

ವಿದ್ಯುತ್ ಚಾಲಿತ ವಾಹನಗಳಿಗೆ ಆಧಾರ್ ಮಾದರಿಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆ

ನವದೆಹಲಿ: ವಿದ್ಯುತ್ ಚಾಲಿತ ವಾಹನಗಳಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ.

ವಿದ್ಯುತ್ ವಾಹನ(ಎಲೆಕ್ಟ್ರಿಕ್ ವೆಹಿಕಲ್) ಬ್ಯಾಟರಿಗಳನ್ನು ಪತ್ತೆ ಹಚ್ಚುವುದಕ್ಕೆ ಮತ್ತು ಪರಿಣಾಮಕಾರಿ ಮರು ಸಂಸ್ಕರಣೆ ಮಾಡಲು ಅನುಕೂಲವಾಗುವಂತೆ ಆಧಾರ್ ರೀತಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಪ್ರಸ್ತಾವನೆಯನ್ನು ಸಾರಿಗೆ ಸಚಿವಾಲಯ ಸಿದ್ಧಪಡಿಸಿದೆ.

ಬ್ಯಾಟರಿ ಉತ್ಪಾದಕರು ಅಥವಾ ಆಮದುದಾರರು ಬ್ಯಾಟರಿಗಳಿಗೆ 21 ಅಂಕೆಗಳ ಬ್ಯಾಟರಿ ಪ್ಯಾಕ್ ಆಧಾರ್ ಸಂಖ್ಯೆಯನ್ನು(ಬಿಪಿಎಎನ್) ನೀಡುವುದು ಕಡ್ಡಾಯವಾಗಿರುತ್ತದೆ. ಇದರಿಂದ ಬ್ಯಾಟರಿಗಳ ಮರುಬಳಕೆ, ಪತ್ತೆ ಸುಲಭವಾಗಲಿದೆ. ಸಂಖ್ಯೆಯನ್ನು ಅಳಿಸಲು ಆಗದ ಜಾಗದಲ್ಲಿ ದಾಖಲಿಸಬೇಕು. ಯಾವುದೇ ರೀತಿಯಲ್ಲೂ ಕೆಡಿಸಲು ಆಗದ ರೀತಿ ಇರಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ಯಾಟರಿ ಉತ್ಪಾದಕರು ಅಥವಾ ಆಮದುದಾರರು ಮಾರುಕಟ್ಟೆಗೆ ತರುವ ಪ್ರತಿಯೊಂದು ಬ್ಯಾಟರಿಗೆ 21 ಅಂಕಿಗಳ ಬ್ಯಾಟರಿ ಪ್ಯಾಕ್ ಆಧಾರ್ ಸಂಖ್ಯೆ(ಬಿ ಪ್ಯಾನ್) ನೀಡುವುದು ಕಡ್ಡಾಯ ಎಂದು ಸಾರಿಗೆ ಇಲಾಖೆ ಕರಡು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular