HomeKarnatakaAEBAS ಮೂಲಕವೇ ನೌಕರರ ಹಾಜರಾತಿ ನಮೂದು; ಕೇಂದ್ರ ಸರ್ಕಾರದ ಮಹತ್ವದ ಸೂಚನೆ

AEBAS ಮೂಲಕವೇ ನೌಕರರ ಹಾಜರಾತಿ ನಮೂದು; ಕೇಂದ್ರ ಸರ್ಕಾರದ ಮಹತ್ವದ ಸೂಚನೆ

ಕೇಂದ್ರ ಸರ್ಕಾರ ತನ್ನ ನೌಕರರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಬಹುತೇಕ ನೌಕರರು ಇದನ್ನು ಪಾಲಿಸುತ್ತಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಇದೀಗ ಸಿಬ್ಬಂದಿ ಸಚಿವಾಲಯದಿಂದ ಮಹತ್ವದ ಸೂಚನೆ ಒಂದನ್ನು ನೀಡಲಾಗಿದ್ದು, ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕವೇ ಹಾಜರಾತಿ ನಮೂದಿಸುತ್ತಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ.

ಇತ್ತೀಚೆಗೆ ನಡೆಸಿದ ಪರಿಶೀಲನೆ ವೇಳೆ ಬಹುತೇಕ ನೌಕರರು ಎಇಬಿಎಎಸ್ ವ್ಯವಸ್ಥೆ ಮೂಲಕ ಹಾಜರಾತಿ ನಮೂದಿಸುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದ್ದು, ಕೋವಿಡ್ ಸಂದರ್ಭದಲ್ಲಿ ಮಾತ್ರ ಈ ವ್ಯವಸ್ಥೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular