HomeKarnatakaGood News: ಹುಬ್ಬಳ್ಳಿಯಲ್ಲಿ ಪೈಲೆಟ್ ತರಬೇತಿ ಶಾಲೆ ಆರಂಭ, ಟೆಂಡರ್ ಆಹ್ವಾನ

Good News: ಹುಬ್ಬಳ್ಳಿಯಲ್ಲಿ ಪೈಲೆಟ್ ತರಬೇತಿ ಶಾಲೆ ಆರಂಭ, ಟೆಂಡರ್ ಆಹ್ವಾನ

ಉತ್ತರ ಕರ್ನಾಟಕ ಭಾಗದ ಜನರಿಗೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು (ಎಎಐ) ಗುಡ್‌ನ್ಯೂಸ್ ನೀಡಿದೆ. ಪೈಲೆಟ್ ಆಗಬೇಕು ಎಂಬ ಕನಸು ಹೊಂದಿರುವ ಯುವ ಜನರಿಗೆ ಸ್ಥಳೀಯವಾಗಿಯೇ ಕೋರ್ಸ್ ಮಾಡಲು ಅವಕಾಶ ಸಿಗಲಿದೆ.

ಹೌದು ಈಗ ಎಎಐ ಎಫ್‌ಟಿಒ (Flying Training Organisations) ಸ್ಥಾಪಿಸಲು ಆನ್‌ಲೈನ್ ಮೂಲಕ ಟೆಂಡರ್ ಕರೆದಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣದಲ್ಲಿ ಎಫ್‌ಟಿಒ ಸ್ಥಾಪನೆ ಮಾಡಲಾಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿ ಮತ್ತು ಭಾರತ ಸರ್ಕಾರದ ನಿರ್ದೇಶನದಂತೆ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಈ ಟೆಂಡರ್ ಕರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಸೋದ, ಕಡಪ, ಹುಬ್ಬಳ್ಳಿ, ತೂತುಕುಡಿ, ಕಿಶನ್‌ಗಢ, ಧಲೇರಾ ಮತ್ತು ಸೋಲಾಪುರ ವಿಮಾನ ನಿಲ್ದಾಣಗಳಲ್ಲಿ ಫ್ಲೈಯಿಂಗ್ ಟ್ರೈನಿಂಗ್ ಆರ್ಗನೈಸೇಶನ್‌ಗಳನ್ನು ಸ್ಥಾಪಿಸಲು ಇ-ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಕಂಪನಿಗಳು ಅರ್ಜಿ ಸಲ್ಲಿಸಲು https://etenders.gov.in/eprocure/app ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಎಂದು ಹೇಳಿದೆ. ಈ ಕ್ರಮ ಭಾರತದ ವಾಯುಯಾನ ತರಬೇತಿ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಮುಂದಿನ ಪೀಳಿಗೆಯ ನುರಿತ ಪೈಲಟ್‌ಗಳನ್ನು ರೂಪಿಸುವ ಗುರಿಯನ್ನು ಹೊಂದಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular