HomeLatest NewsBIG NEWS: ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಮಾಜಿ ಸಂಸದನಿಗೆ ನೋಟಿಸ್ ಜಾರಿ

BIG NEWS: ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಮಾಜಿ ಸಂಸದನಿಗೆ ನೋಟಿಸ್ ಜಾರಿ

ಬೆಂಗಳೂರು: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಬಸ್ ಪೇಟೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಅನಂತ್ ಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ಕಾರು ಓವರ್ ಟೇಕ್ ಮಾಡಿದಕ್ಕೆ ಅನಂತ್ ಕುಮಾರ್ ಹೆಗಡೆ ಪುತ್ರ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಗಳು ನಾಲ್ವರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲ್ಲೆ ನಡೆಸಿದ್ದ ವೇಳೆ ಕಾರಿನಲ್ಲಿ ಅನಂತ್ ಕುಮಾರ್ ಹೆಗಡೆ ಕೂಡ ಇದ್ದರು ಎನ್ನಲಾಗಿದೆ.

ಪ್ರಕರಣ ಸಂಬಂಧ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಗನ್ ಮ್ಯಾನ್ ನನ್ನು ಬಂಧಿಸಲಾಗಿತ್ತು. ಸದ್ಯ ಆರೋಪಿಗಳು ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಈ ನಡುವೆ ದಾಬಸ್ ಪೇಟೆ ಪೊಲೀಸರು ಅನಂತ್ ಕುಮಾರ್ ಹೆಗಡೆಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular