BREAKING: ದೆಹಲಿ ವಿಧಾನಸಭೆ ಚುನಾವಣೆಗೆ AAP ನಿಂದ 38 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನವದೆಹಲಿಯಿಂದ ಕೇಜ್ರಿವಾಲ್ ಸ್ಪರ್ಧೆ

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನವದೆಹಲಿಯಿಂದ ಸ್ಪರ್ಧಿಸಲಿದ್ದಾರೆ.

ಇತರ ಪ್ರಮುಖ ಅಭ್ಯರ್ಥಿಗಳಲ್ಲಿ ಕಸ್ತೂರ್ಬಾ ನಗರದಿಂದ ರಮೇಶ್ ಪಹಲ್ವಾನ್ ಮತ್ತು ಉತ್ತಮ್ ನಗರದಿಂದ ಪೂಜಾ ಬಲಿಯಾನ್. ಹಾಲಿ ಶಾಸಕರಾಗಿರುವ ಪತಿ ನರೇಶ್ ಬಲಿಯಾನ್ ಅವರ ಸ್ಥಾನದಲ್ಲಿ ಪೂಜಾ ಸ್ಪರ್ಧಿಸಿದ್ದಾರೆ. ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷದ 32 ಅಭ್ಯರ್ಥಿಗಳ ಮೂರು ಪಟ್ಟಿಗಳನ್ನು ಬಿಡುಗಡೆ ಮಾಡಲಾಗಿತ್ತು.

ವಿಧಾನಸಭೆಯ ಎಲ್ಲಾ 70 ಸ್ಥಾನಗಳ ಅಭ್ಯರ್ಥಿಗಳ ಘೋಷಣೆ ಮಾಡಿದಂತಾಗಿದೆ. ಇಂದು ಆಮ್ ಆದ್ಮಿ ಪಕ್ಷವು ಎಲ್ಲಾ 70 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಪಕ್ಷವು ಸಂಪೂರ್ಣ ವಿಶ್ವಾಸ ಮತ್ತು ಸಂಪೂರ್ಣ ಸಿದ್ಧತೆಯೊಂದಿಗೆ ಚುನಾವಣೆಯನ್ನು ಎದುರಿಸುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read