‘ಪದ್ಮವಿಭೂಷಣ’ ‘ಪದ್ಮಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವಿಕಲಚೇತನ ವ್ಯಕ್ತಿಗಳಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಅಧ್ಯಕ್ಷರು / ಕಾರ್ಯದರ್ಶಿಗಳಿಗೆ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025ನೇ ಸಾಲಿಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ವೈದ್ಯಕೀಯ, ಸಮಾಜಸೇವೆ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಮತ್ತಿತರ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’ ‘ಪದ್ಮಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ನೀಡಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಹಿನ್ನೆಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವಿಕಲಚೇತನ ವ್ಯಕ್ತಿಗಳಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಅಧ್ಯಕ್ಷರು / ಕಾರ್ಯದರ್ಶಿಗಳಿಗೆ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿಗಳು ಜಾಲತಾಣ https://www.padmaawards.gov.in ನಲ್ಲಿ ಲಭ್ಯವಿದ್ದು ಈ ನಿಯಮಾಳಿಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಪಡೆದು ಆಂಗ್ಲ ಭಾಷೆಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ತಿಳಿಸಿರುವ ಎಲ್ಲಾ ಅಂಶಗಳನ್ನು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್, 31 ರೊಳಗೆ ಸಾಪ್ಟ್ ಕಾಫಿಯನ್ನು ಇ-ಮೇಲ್ ವಿಳಾಸ dpar@karnataka.gov.in ಗೆ ಕಳುಹಿಸಲು ತಿಳಿಸಿದೆ. ಒಂದು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read