ಮಂಗಳೂರು : ಮಂಗಳೂರಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಶ್ರೀ @DrParameshwara, @DgpKarnataka ಹಾಗೂ ಕಾನೂನು ಸುವ್ಯವಸ್ಥೆ ADGP ಜೊತೆ ಮಾತಾಡಿದ್ದೇನೆ. ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಶ್ರೀ @DrParameshwara, @DgpKarnataka ಹಾಗೂ ಕಾನೂನು ಸುವ್ಯವಸ್ಥೆ ADGP ಜೊತೆ ಮಾತಾಡಿದ್ದೇನೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 27, 2025
ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ.…