ದಕ್ಷಿಣ ಕನ್ನಡ ಜಿಲ್ಲೆ : ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮರಳು ಸಾಗಾಟಕ್ಕೆಂದು ಹೋದಾಗ ಅಬ್ದುಲ್ ರೆಹಮಾನ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.
ದೀಪಕ್, ಸುಮಿತ್ ಸೇರಿದಂತೆ 15 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನಿಸಾರ್ ಎಂಬುವವರು ದೂರು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. BNS ಕಾಯ್ದೆ 103,109, 118(1), 118 (2), 190 191(1), 191(2), 191(3) ರಡಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹಿಮಾನ್ ಹತ್ಯೆ ಖಂಡನೀಯ
ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಶ್ರೀ @DrParameshwara@DgpKarnataka ಹಾಗೂ ಕಾನೂನು ಸುವ್ಯವಸ್ಥೆ ADGP ಜೊತೆ ಮಾತಾಡಿದ್ದೇನೆ. ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.