HomeKarnatakaಮೈಸೂರು ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಆನೆಗೆ ವಿಶೇಷ ಗೌರವ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಆನೆಗೆ ವಿಶೇಷ ಗೌರವ

ಬೆಂಗಳೂರು- ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಉತ್ಸವದಲ್ಲಿ ಹಲವು ವರ್ಷಗಳ ಕಾಲ ಅಂಬಾರಿ ಹೊತ್ತು ನಾಡಿನ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಅಭಿಮನ್ಯು ಆನೆಗೆ ಈ ಬಾರಿಯ ದಸರಾದಲ್ಲಿ ವಿಶೇಷ ಗೌರವ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಹಾಗೂ ಜೈವಿಕ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ. ಜಂಬೂಸವಾರಿಯಲ್ಲಿ ದಸರಾ ಗಜಪಡೆಯ ಆನೆಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಈ ಪರಂಪರೆಯಲ್ಲಿ ಅಭಿಮನ್ಯುವಿನ ಸೇವೆ ಅತ್ಯಂತ ವಿಶೇಷವಾಗಿದೆ ಎಂದು ಹೇಳಿದ್ದಾರೆ.

ಹಲವು ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸಿರುವ ಅಭಿಮನ್ಯು, ಅಂಬಾರಿ ಹೊರುವ ಜವಾಬ್ದಾರಿಯನ್ನು ಶಿಸ್ತು, ಧೈರ್ಯ ಹಾಗೂ ಯಶಸ್ವಿಯಾಗಿ ನಿರ್ವಹಿಸುವ ಮೂಲಕ ನಾಡಿನ ಜನರ ಪ್ರೀತಿ ಮತ್ತು ಗೌರವಕ್ಕೆ ಪಾತ್ರವಾಗಿದೆ. ಆನೆಯ ದೀರ್ಘಕಾಲದ ಅಮೂಲ್ಯ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಇತ್ತೀಚೆಗೆ ಆಯೋಜಿಸಿದ್ದ ಅಭಿಮನ್ಯು ಆನೆಯ ಬೀಳ್ಕೊಡುಗೆ ಹಾಗೂ ಗೌರವ ಸಮಾರಂಭವೂ ಯಶಸ್ವಿಯಾಗಿ ನಡೆದಿದ್ದು, ಸಾರ್ವಜನಿಕರು ಮತ್ತು ದಸರಾ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಶಾನೆ ಆನೆಯಾಗಿ ಅಭಿಮನ್ಯು

ಈ ಹಿನ್ನೆಲೆಯಲ್ಲಿ ಅಭಿಮನ್ಯುವಿನ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಮೈಸೂರು ದಸರಾ-2026ರ ಜಂಬೂಸವಾರಿ ಉತ್ಸವದಲ್ಲಿ ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಗಜಪಡೆಯೊಂದಿಗೆ ಗೌರವಪೂರ್ವಕವಾಗಿ ಉಪಸ್ಥಿತಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗೆ

ಸಚಿವರು ಸೂಚಿಸಿದ್ದಾರೆ.

ಅಭಿಮನ್ಯುವಿನಂತಹ ದಸರಾ ಪರಂಪರೆಯ ಹೆಮ್ಮೆಯ ಆನೆಯ ಹಲವು ವರ್ಷಗಳ ಸೇವೆಯನ್ನು ಸ್ಮರಿಸಿ ಗೌರವಿಸುವುದರಿಂದ ಮೈಸೂರು ದಸರಾ ಮಹೋತ್ಸವದ ವೈಭವ ಮತ್ತು ಐತಿಹಾಸಿಕ ಪರಂಪರೆಗೆ ಮತ್ತಷ್ಟು ಮೆರುಗು ದೊರೆಯಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular