Chaithra kundapura Case : ಒಡಿಸ್ಸಾದಲ್ಲಿ ‘ಅಭಿನವ ಹಾಲಶ್ರೀ’ ಅರೆಸ್ಟ್ : ದೊಡ್ಡ ದೊಡ್ಡವರ ಹೆಸರು ಹೊರ ಬರುತ್ತಾ..?

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಅರೆಸ್ಟ್ ಆಗಿದೆ. ಇದೀಗ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರಿಯನ್ನು ಕೂಡ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹಾಲಶ್ರೀ ಬಂಧನದ ಬಳಿಕ ಪ್ರಕರಣ ಇನ್ನಷ್ಟು ತಿರುವು ಪಡೆಯುವ ಸಾಧ್ಯತೆಯಿದೆ. ಹೌದು, ಸ್ವಾಮೀಜಿ ಸಿಕ್ಕಿಹಾಕಿಕೊಂಡರೆ ದೊಡ್ಡ ದೊಡ್ಡವರ ಹೆಸರು ಹೊರಬರುತ್ತೆ ಎಂದು ಚೈತ್ರಾ ಕುಂದಾಪುರ ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಸ್ವಾಮೀಜಿ ಸಿಸಿಬಿ ಪೊಲೀಸರ ಖೆಡ್ಡಾಗೆ ಬಿದ್ದಿದ್ದು, ದೊಡ್ಡ ದೊಡ್ಡವರ ಹೆಸರು ಬಹಿರಂಗವಾಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

ವಂಚನೆ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಹಾಲು ಮಠಕ್ಕೂ ಬಾರದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ಸ್ವಾಮೀಜಿ ಬಂಧನ ಬಹಳ ಕುತೂಹಲ ಮೂಡಿಸಿದೆ. ಒಡಿಶಾದ ಕಟಕ್ ನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read