ಬಂಧನ ಭೀತಿಯಲ್ಲಿದ್ದ ನಟಿ ಅಭಿನಯಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಜಾಮೀನು

ಬೆಂಗಳೂರು: ನಟಿ ಅಭಿನಯ ಕುಟುಂಬಕ್ಕೆ ಜೈಲು ಶಿಕ್ಷೆ ಪ್ರಕಟ ವಿಚಾರಕ್ಕೆ ಸಂಬಂಧಿಸಿದಂತೆ, ಅಭಿನಯ ಮತ್ತು ಕುಟುಂಬದ ಇಬ್ಬರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಭಿನಯ, ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಅವರಿಗೆ ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಅವರು ತಲೆಮರೆಸಿಕೊಂಡಿದ್ದ ಹಿನ್ನಲೆಯಲ್ಲಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.

ಜಾಮೀನು ಕೋರಿ ಅಭಿನಯ, ಕುಟುಂಬದವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮೂವರಿಗೂ ಸುಪ್ರೀಂಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಅಭಿನಯ ಅತ್ತಿಗೆ ವರಲಕ್ಷ್ಮಿ ದೂರು ನೀಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read