HomeKarnatakaBIG NEWS : ಯಾವುದೇ ಕಾರಣಕ್ಕೂ ಪಂಚಮಸಾಲಿಗೆ 'ಮೀಸಲಾತಿ' ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ...

BIG NEWS : ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ.!

ಬೆಂಗಳೂರು : ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಇದೀಗ,  ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಭೇಟಿಯಾಗಿ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಒತ್ತಾಯಿಸಿ, ಮನವಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular