HomeLatest Newsಕಲಬುರಗಿಯಲ್ಲಿ ಗಾಂಧಿ, ನೆಹರು, ಇಂದಿರಾ, ರಾಜೀವ್ ಗಾಂಧಿ ಪುತ್ಥಳಿ ಸ್ಥಾಪಿಸಲು ಸಂಪುಟ ನಿರ್ಧಾರ

ಕಲಬುರಗಿಯಲ್ಲಿ ಗಾಂಧಿ, ನೆಹರು, ಇಂದಿರಾ, ರಾಜೀವ್ ಗಾಂಧಿ ಪುತ್ಥಳಿ ಸ್ಥಾಪಿಸಲು ಸಂಪುಟ ನಿರ್ಧಾರ

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಹಾಗೂ ರಾಜೀವ್‌ಗಾಂಧಿ ಅವರ ಪುತ್ಥಳಿಯನ್ನು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಪ್ರಮುಖ ನಿರ್ಣಯಗಳು:

ಕೆಕೆಆರ್‌ಡಿಬಿ ಅನುದಾನದಡಿ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ₹66.75 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಹಾಗೂ ರಾಜೀವ್‌ಗಾಂಧಿ ಅವರ ಪುತ್ಥಳಿಯನ್ನು ಸ್ಥಾಪಿಸಲು ನಿರ್ಧಾರ

ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ ಕಾಮಗಾರಿಯನ್ನು ₹70.70 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ.

ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣ ಕಾಮಗಾರಿಯನ್ನು ನಬಾರ್ಡ್ ಸಹಯೋಗದೊಂದಿಗೆ ₹20 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ.

ಬೆಂಗಳೂರಿನ ಕೆಎಸ್‌ಡಿಎಲ್‌ ಸಂಸ್ಥೆಯ ಉತ್ಪಾದನಾ ಘಟಕಕ್ಕೆ ₹17.70 ಕೋಟಿ ಮೊತ್ತದಲ್ಲಿ ಸಾಬೂನು ತಯಾರಿಸುವ ಯಂತ್ರೋಪಕರಣಗಳ ಖರೀದಿಗೆ ಆಡಳಿತಾತ್ಮಕ ಅನುಮೋದನೆ.

ಕೆಕೆಆರ್‌ಡಿಬಿ ವತಿಯಿಂದ ₹50 ಕೋಟಿ ವೆಚ್ಚದಲ್ಲಿ ಕಲಬುರಗಿಯಲ್ಲಿ ನೂತನ ಮೆಗಾಡೈರಿ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ.

ಕೆಕೆಆರ್‌ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ನೂತನ ಪ್ರಾದೇಶಿಕ ಸಹಕಾರ ಭವನ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ.

ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯ೦ತ್ರೋಪಕರಣ ಮತ್ತು ಪೀಠೋಪಕರಣಗಳನ್ನು ‘₹40 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.

ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ₹12.30 ಕೋಟಿ ವೆಚ್ಚದ ಪರಿಷ್ಕೃತ ಅಂದಾಜಿಗೆ ಅನುಮೋದನೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular