HomeKarnatakaಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ವಿರುದ್ಧ ಮಾಫಿ ಸಾಕ್ಷಿ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ವಿರುದ್ಧ ಮಾಫಿ ಸಾಕ್ಷಿ

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ಎ2 ಶಿವಕುಮಾರ್ ಅರ್ಜಿ ಸಲ್ಲಿಸಿದ್ದಾರೆ. 42ನೇ ಎಸಿಜೆಎಂ ನ್ಯಾಯಾಲಯದಲ್ಲಿ ಶಿವಕುಮಾರ್ ಅರ್ಜಿಯ ವಿಚಾರಣೆ ನಡೆಸಲಾಗಿದೆ. ಮಾಫಿ ಸಾಕ್ಷಿ ಅರ್ಜಿಗೆ ಸೂರಜ್ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ವಿಚಾರಣೆಯನ್ನು ಜೂನ್ 24ಕ್ಕೆ 42ನೇ ಎಸಿಜೆಎಂ ನ್ಯಾಯಾಲಯ ಮುಂದೂಡಿದೆ.

ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿ ಮಾಫಿ ಸಾಕ್ಷಿಯಾಗಲು ಒಪ್ಪಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎ2 ಆರೋಪಿ ಶಿವಕುಮಾರ್ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಸಲ್ಲಿಸಿದ ಅರ್ಜಿಯನ್ನು 42ನೇ ಎಸಿಜೆಎಂ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.

ಈ ಅರ್ಜಿಗೆ ಸೂರಜ್ ರೇವಣ್ಣ ಪರ ವಕೀಲರು ಮಂಗಳವಾರ ಆಕ್ಷೇಪಣೆ ಸಲ್ಲಿಸಿದ್ದು, ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 24ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ 2024ರಲ್ಲಿ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಐಡಿ ಎಸ್ಐಟಿ ಅಧಿಕಾರಿಗಳು ಕೃತ್ಯಕ್ಕೆ ಸಹಕರಿಸಿದ ಆರೋಪ ಸಂಬಂಧ ಶಿವಕುಮಾರ್ ಅವರನ್ನು ಎರಡನೇ ಆರೋಪಿಯಾಗಿ ಪರಿಗಣಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಹಂತದ ನಡುವೆ ಆರೋಪಿ ಶಿವಕುಮಾರ್ ತನ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಹೀಗಾಗಿ ಸೂರಜ್ ರೇವಣ್ಣಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular