HomeKarnatakaಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಎಂಎಲ್ಸಿ ಸೂರಜ್ ರೇವಣ್ಣಗೆ ಶಾಕ್

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಎಂಎಲ್ಸಿ ಸೂರಜ್ ರೇವಣ್ಣಗೆ ಶಾಕ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಪ್ರಕರಣದಿಂದ ಕೈಬಿಡುವಂತೆ ಕೋರಿದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಸೂರಜ್ ರೇವಣ್ಣ ರ ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್  ಗಜಾನನಭಟ್ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಒಂದು ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸೂರಜ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆ ಬಿಡುಗಡೆಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular