ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ಎರಡನೇ ಆರೋಪಿ ಅರ್ಜಿ ಸಲ್ಲಿಸಿದ್ದಾರೆ.
42ನೇ ಎಸಿಜೆಎಂ ನ್ಯಾಯಾಲಯಕ್ಕೆ ಪ್ರಕರಣದ ಎರಡನೇ ಆರೋಪಿ ಶಿವಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣಿ ಸಲ್ಲಿಕೆಗೆ ಸೂರಜ್ ರೇವಣ್ಣ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಮೇ 16ಕ್ಕೆ ಮುಂದೂಡಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದೆ. ಇನ್ನು ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಸೂರಜ್ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

