HomeKarnatakaBIG NEWS: ವಿಧಾನಸಭೆ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ: ಎಬಿಪಿ, ಸಿ- ವೋಟರ್ ಸಮೀಕ್ಷೆ

BIG NEWS: ವಿಧಾನಸಭೆ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ: ಎಬಿಪಿ, ಸಿ- ವೋಟರ್ ಸಮೀಕ್ಷೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಎಬಿಪಿ, ಸಿ- ವೋಟರ್ ಸಮೀಕ್ಷೆ ಪ್ರಕಟವಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 115 -127, ಬಿಜೆಪಿ 68 -80, ಜೆಡಿಎಸ್ 23 -35, ಇತರರು 2 ಕ್ಷೇತ್ರಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 26ರಿಂದ ಮಾರ್ಚ್ 26ರವರೆಗೆ ಎಬಿಪಿ, ಸಿ -ವೋಟರ್ ಸಮೀಕ್ಷೆ ನಡೆಸಲಾಗಿದೆ.

2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಕೊರತೆ ಅನುಭವಿಸಿತು. ಬಿಜೆಪಿ ಕಳೆದ ಬಾರಿ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ  ಬಿಜೆಪಿ  ABP News-CVoter Karnataka Opinion Poll 2023 ರ ಪ್ರಕಾರ 68 ರಿಂದ 80 ಅಸೆಂಬ್ಲಿ ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ.

ಸಮೀಕ್ಷೆಯ ಪ್ರಕಾರ 2023 ರ ವಿಧಾನಸಭೆ ಚುನಾವಣೆಯಲ್ಲಿ 115 ರಿಂದ 127 ಸ್ಥಾನಗಳ ನಡುವೆ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತದೆ. 2018 ರ ಚುನಾವಣೆಯಲ್ಲಿ ಜೆಡಿಎಸ್ 37 ಸ್ಥಾನಗಳನ್ನು ಪಡೆದುಕೊಂಡಿತು. ಈ ಬಾರಿ 23 ರಿಂದ 35 ವಿಧಾನಸಭಾ ಸ್ಥಾನಗಳನ್ನು ಜೆಡಿಎಸ್ ಪಡೆಯುತ್ತದೆ ಎಂದು ಭವಿಷ್ಯ ನುಡಿದಿದೆ.

ಆದರೆ, ಸಮೀಕ್ಷೆಯೇ ಸತ್ಯವಲ್ಲ. ಇದು ಆಯಾ ಕಾಲ ಮತ್ತು ಸಂದರ್ಭ, ಸಂದರ್ಶಿಸಿದ ಜನರನ್ನು ಆಧರಿಸಿರುತ್ತದೆ. ಮತದಾರರ ಒಲವು ಯಾರ ಕಡೆಗಿದೆ, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬುದನ್ನು ತಿಳಿಯಲು ಮೇ 13 ರ ಫಲಿತಾಂಶದ ದಿನದವರೆಗೆ ಕಾಯಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular